ಪ್ರಧಾನಮಂತ್ರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಆರ್. ವಿ.ದೇಶಪಾಂಡೆ

ಗುರುವಾರ, 10 ಜನವರಿ 2019 (09:13 IST)
ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್ ನ ಕಂದಾಯ ಸಚಿವ ಆರ್. ವಿ.ದೇಶಪಾಂಡೆ ಅವರು ಹೇಳಿದ್ದಾರೆ.


ಈ ಕುರಿತು ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗದಲ್ಲಿನ ಬಡವರಿಗೆ ಶೇ. 10% ರಷ್ಟು ಮೀಸಲಾತಿ ಜಾರಿಗೊಳಿಸಿದೆ. ಇದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಮೂಲಕ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿದ್ದು, ಇದಕ್ಕೆ ಅನುಮೋದನೆ ಸಹ ಪಡೆದಿರುವುದು ಸ್ವಾಗತಾರ್ಹ ಕ್ರಮ. ಇದನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ’ ಎಂದಿದ್ದಾರೆ.


‘ದೇಶದಲ್ಲಿನ ಆರ್ಥಿಕವಾಗಿ ಹಿಂದುಳಿದ ಮೀಸಲಾತಿಗೆ ಒಳಪಡದ ಸಾಮಾನ್ಯ ವರ್ಗದಲ್ಲಿನ ಬಡವರಿಗೆ ಅನುಕೂಲವಾಗಲಿದೆ. ವಾರ್ಷಿಕ ಆದಾಯ 8 ಲಕ್ಷದ ಒಳಗಿನವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ದೊರೆತಿದೆ. ಇದರಿಂದ ಸಾಕಷ್ಟು ಬಡ ಹಾಗೂ ಮಧ್ಯಮ ವರ್ಗದ ಭಾರತೀಯರಿಗೆ ಅನುಕೂಲವಾಗುತ್ತದೆ. ಇದರಿಂದ ಒಟ್ಟು ಮೀಸಲಾತಿ 50 ರಿಂದ 60 ಕ್ಕೆ ಏರಿಕೆ ಆಗಲಿದೆ. ಇದಕ್ಕಾಗಿ ನಾನು ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಅಭಿನಂದಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ