ರಾಷವೇಶ್ವರ ಶ್ರೀ ವಿರುದ್ಧದ ಅತ್ಯಾಚಾರ ಪ್ರಕರಣ: ಮಠಕ್ಕೆ ಭೇಟಿ ನೀಡಿದ ಸಿಐಡಿ

ಸೋಮವಾರ, 6 ಜುಲೈ 2015 (15:57 IST)
ಜಿಲ್ಲೆಯ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ರಾಘವೇಶ್ವರ ಭಾರತೀ ಶ್ರೀಗಳು ಎದುರಿಸುತ್ತಿರುವ ಅತ್ಯಾಚಾರ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಇಂದು ಮಠಕ್ಕೆ ಭೇಟಿ ನೀಡಿದ್ದು, ಮಠದ ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. 
 
ಕಳೆದ ಒಂದು ವಾರದಿಂದ ತನಿಖೆ ಚುರುಕುಗೊಂಡಿದ್ದು, ಈ ಹಿಂದೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತನಿಖೆ ನಡೆಸಲಾಗಿತ್ತು. ಪ್ರಸ್ತುತ ಮಠಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಮಠದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಡಳಿತಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ. 
 
ಏನಿದು ಪ್ರಕರಣ?:
ಮಠದಲ್ಲಿ ಗಾಯಕಿಯಾಗಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲೆ ಶ್ರೀಗಳು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆಯ ಪುತ್ರಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಗಂಭೀರತೆಯನ್ನು ಅರಿತ ಸರ್ಕಾರ, ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿತ್ತು. ಆದ್ದರಿಂದ ತನಿಖೆಯನ್ನು ಚುರುಕುಗೊಳಿಸಿರುವ ಅಧಿಕಾರಿಗಳು, ಇಂದು ಮಠಕ್ಕೆ ಭೇಟಿ ನೀಡಿ ಮಠದ ಸಿಬ್ಬಂದಿಗಳನ್ನು ತನಿಖೆಗೊಳಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ