ರಾಗಿ ನಿರ್ಬಂಧ ತೆಗೆಯಿರಿ ಸಿದ್ದು

ಮಂಗಳವಾರ, 25 ಜನವರಿ 2022 (15:54 IST)
ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು. ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗದಿಗೊಳಿಸಿರುವ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ. ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ ತರುತ್ತಾರೊ ಅಷ್ಟನ್ನೂ ಖರೀದಿಸಬೇಕು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೇವಲ ೨.೧೦ ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕುವಂತೆ ಒತ್ತಾಯಿಸಬೇಕು. ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೆ ಮತ್ತೆ ಆರಂಭಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿ ಬೆಳೆಯುತ್ತಾರೆ. ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ರೈತರು ಮಾರುಕಟ್ಟೆಗೆ ತರುತ್ತಿದ್ದಾರೆ. ಸರ್ಕಾರವು ಈ ವರ್ಷ ಜನವರಿ ೧ ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆ ಆರಂಭಿಸಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ