ಸಚಿವ ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್
ನಿನ್ನೆ ಸಂಜೆ ದೆಹಲಿಯಲ್ಲಿ ರಾಹುಲ್ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈಗ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳ ಪಟ್ಟಿ ಅಂತಿಮವಾಗಿದ್ದು, ಕಾಂಗ್ರೆಸ್ ಗೆ 20 ಮತ್ತು ಜೆಡಿಎಸ್ ನ 10 ಸ್ಥಾನಗಳು ಫಿಕ್ಸ್ ಆಗಿವೆ. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನದ ಘೋಷಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ.