ಕಾಂಗ್ರೆಸ್ ನಾಯಕರ ಜೊತೆ ರಾಹುಲ್ ಗಾಂಧಿ ಸಭೆ

ಶುಕ್ರವಾರ, 1 ಏಪ್ರಿಲ್ 2022 (16:10 IST)
ಬಿಬಿಎಂಪಿ ಚುನಾವಣೆ ಹಾಗೂ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಕಾಂಗ್ರೆಸ್ ಮುಖಂಡರ ಜೊತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿದ್ದಾರೆ.
 
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಹಿಂಭಾಗದ ರಾಜೀವ್ ಗಾಂಧಿ ಭವನದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯತ್ವ ಅಭಿಯಾನದ ಪ್ರಗತಿ ಹಾಗೂ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ನಗರ ಕಾಂಗ್ರೆಸ್ ಮುಖಂಡರ ಜೊತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸುತ್ತಿದ್ದಾರೆ.
ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು ಹಾಗೂ ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರು ಸಭೆಯಲ್ಲಿ ಪಾಲ್ಗೊಂಡು ಸಮಾಲೋಚಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ