ರಾಹುಲ್ ಗಾಂಧಿ ದೇಶದ ಜನತೆಯಲ್ಲಿ ಕ್ಷಮೆ ಕೇಳಲಿ: ಅನಂತಕುಮಾರ್

ಶನಿವಾರ, 17 ಡಿಸೆಂಬರ್ 2016 (14:42 IST)
ಸಂಸತ್‌ನ ಚಳಿಗಾಲದ ಅಧಿವೇಶನ ಹಾಳಾಗಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಣ. ಈ ಕೂಡಲೇ ಅವರು ದೇಶದ ಜನತೆಯಲ್ಲಿ ಕ್ಷಮೆ ಕೇಳಲಿ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪ ಹಣ ಹಾಗೂ ಗರಿಷ್ಠ ಮುಖಬೆಲೆಯ ನೋಟು ನಿಷೇಧದ ಕುರಿತು ಸೂಕ್ತ ಉತ್ತರ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧರಿದ್ದರು. ಆದರೆ, ಕಾಲಹರಣದಲ್ಲಿಯೇ ಸಂಸತ್‌ನ ಕಲಾಪ ಮುಕ್ತಾಯವಾಯ್ತು ಎಂದರು.
 
ಸಂಸತ್‌ನ ಚಳಿಗಾಲದ ಅಧಿವೇಶನ ಹಾಳಾಗಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ನೋಟ್ ಬ್ಯಾನ್ ವಿಷಯವನ್ನು ಮುಂದಿಟ್ಟುಕೊಂಡು ಕಲಾಪವನ್ನು ಹಾಳು ಮಾಡಿದ್ದಾರೆ. ಹೀಗಾಗಿ ಅವರು ದೇಶದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ