ಎನ್‌ಡಿಎ ಸರ್ಕಾರದಿಂದ ರೈತರ ಮೇಲೆ ಅತಿಕ್ರಮಣ– ರಾಹುಲ್ ಗಾಂಧಿ

ಸೋಮವಾರ, 12 ಫೆಬ್ರವರಿ 2018 (09:46 IST)
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ರೈತರನ್ನು ರಕ್ಷಣೆ ಮಾಡುವ ಯೋಜನೆ ತೆಗೆದುಹಾಕಿ, ರೈತರ ಮೇಲೆ ಅತಿಕ್ರಮಣ ಮಾಡುವ ನೀತಿ ಅನುಸರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
 
ಸಿಂಧನೂರಿನಲ್ಲಿ ಜನಾಶೀರ್ವಾದ ಯಾತ್ರೆಯ ನಿಮಿತ್ತ ರೈತರೊಂದಿಗೆ ಸಂವಾದದಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ರಕ್ಷಣೆಗಾಗಿ ಬೆಂಬಲ ಬೆಲೆ ನೀಡುವುದು ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಆದರೆ, ಎನ್‌ಡಿಎ ಸರ್ಕಾರ ಅವೆಲ್ಲವನ್ನೂ ತೆಗೆದುಹಾಕಿದೆ. ರೈತರು ನಿಯತ್ತಿನಿಂದ ಸಂಪಾದಿಸಿದ್ದ ಹಣವನ್ನು ಕಸಿದುಕೊಂಡು ಪರೋಕ್ಷವಾಗಿ ಉದ್ಯಮಿಗಳಿಗೆ ಲಾಭ ಮಾಡಲು ನೋಟು ಅಮಾನ್ಯೀಕರಣ ಜಾರಿಗೊಳಿಸಿದರು. ಉದ್ಯಮಿಗಳು ಹಿಂಬಾಗಿಲಿನಿಂದ ಕಪ್ಪು ಹಣವನ್ನು ಕಾನೂನು ಬದ್ಧ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
 
ಉದ್ಯಮಿಗಳ ಸಮಸ್ಯೆ ಪರಿಹಾರಕ್ಕೆ ಎನ್‌ಡಿಎ ಸರ್ಕಾರ ಒಂದು ವರ್ಷದಲ್ಲಿ ₹1.5 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ, ರೈತರ ಸಾಲ ಮನ್ನಾ ಮಾಡುತ್ತಿಲ್ಲ. ರೈತರ ಸಾಲ ಏಕೆ ಮನ್ನಾ ಮಾಡುವುದಿಲ್ಲ ಎಂದು ಪ್ರಧಾನಿ ಕಚೇರಿಗೆ ಹೋಗಿ ಪ್ರಶ್ನಿಸಿದರೂ ಉತ್ತರ ಕೊಡಲಿಲ್ಲ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ