ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂರತ್ ಕೋರ್ಟ್ಗೆ ಮನವಿ ಸಲ್ಲಿಸಿದ್ರು.. ಈ ಕುರಿತು ಸೂರತ್ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ತಡೆಯಾಜ್ಞೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿದೆ. ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದರಿಂದ ನ್ಯಾಯಾಲಯ ಜಾಮೀನು ನೀಡಿತ್ತು. ವಯನಾಡ್ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್ನ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.