ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

Sampriya

ಶುಕ್ರವಾರ, 8 ಆಗಸ್ಟ್ 2025 (16:34 IST)
Photo Credit X
ಶಿವಮೊಗ್ಗ: ಬಿಜೆಪಿ ಮೇಲೆ ಮತಗಳ್ಳತನದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್‍ಗೆ ಮತಗಳ್ಳತನದ ಹಿನ್ನೆಲೆ ಬಹಳ ಹಿಂದಿನಿಂದಲೂ ಇದೆ. ಅವರ ಅಜ್ಜಿಯೇ ಮತಗಳ್ಳತದಿಂದ ಗೆದ್ದಿದ್ದರು ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಈ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದೇಶದ ತುರ್ತು ಪರಿಸ್ಥಿತಿಗೂ ಮೊದಲೇ ಮತಗಳ್ಳತನ ನಡೆದಿದೆ. ರಾಯ್‍ಬರೇಲಿಯಲ್ಲಿ ರಾಜ್ ನಾರಾಯಣ್ ವಿರುದ್ಧ ನಡೆದ ಚುನಾವಣೆಯಲ್ಲಿ ಇಂದಿರಾ ಗಾಂಧಿ  ಅವರು ಮತಗಳ್ಳತನದಿಂದ ಗೆದ್ದಿದ್ದರು. ಈಗ ರಾಹುಲ್ ಅವರು ಪ್ರಚಾರಕ್ಕಾಗಿ ಮತಗಳ್ಳತನದ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ ತಿರುಗೇಟುಕೊಟ್ಟಿದ್ದಾರೆ. 

ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋಕೆ ನಾಚಿಕೆಯಾಗಬೇಕು. ಚುನಾವಣೆ ಬಳಿಕ ಇವರಿಗೆ ತಕ್ಷಣ ಆಕ್ಷೇಪ ಸಲ್ಲಿಸಲು ಅವಕಾಶವಿದ್ದಾಗ, ಬಿಎಲ್‍ಎಗಳು ಮತಗಟ್ಟೆಗಳಲ್ಲಿ ಏನು ಮಾಡುತ್ತಿದ್ದರು. 

ಮತಗಟ್ಟೆಗಳಲ್ಲಿ ಬಿಎಲ್‍ಎ ನೇಮಕಕ್ಕೆ ಚುನಾವಣಾ ಆಯೋಗ ಅವಕಾಶ ನೀಡಿದ್ದಾಗ ಯಾರೊಬ್ಬರು ತಕರಾರು ಎತ್ತಿಲ್ಲ. ಆಪಾದನೆ ನಂತರದಲ್ಲೂ ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಲು ಹೇಳಿದೆ. ಇವರು ಅಫಿಡವಿಟ್ ಸಲ್ಲಿಸಲು ಸಿದ್ಧರಿಲ್ಲ. ರಾಹುಲ್ ಗಾಂಧಿ ಮಾತುಗಳಲ್ಲಿ ಅವರಿಗೆಯೇ ನಂಬಿಕೆಯಿಲ್ಲ. ಜನರ ಕಿವಿಗೆ ಹೂ ಇಡುವ ಕೆಲಸ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ