ರಾಜ್ಯದಲ್ಲಿ ಘಟನೆಗಳ ಬಗ್ಗೆ ರಾಹುಲ್ ಗಾಂಧಿ ಬಾಯಿಬಿಡಬೇಕು– ಶೋಭಾ

ಶನಿವಾರ, 24 ಫೆಬ್ರವರಿ 2018 (12:03 IST)
ರಾಜ್ಯದಲ್ಲಿ ನಡೆದಿರುವ ಘಟನೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಾಯಿ ಬಿಡಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಹಾಲ್ ಗಾಂಧಿ ಅವರು ಪ್ರವಾಸ ನಡೆಸುತ್ತಿರುವುದರಿಂದ ಕಾಂಗ್ರೆಸ್ ದುರಹಂಕಾರದ ಬಗ್ಗೆ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ 38 ಗಂಟೆಗಳ ಬಳಿಕ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ನನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿಗಳ ಮಾತಿಗೆ ಬೆಲೆಯಿಲ್ಲವೇ, ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾತು ಕೇಳುಯತ್ತಿಲ್ಲವಾ, ಶಾಸಕ ಹ್ಯಾರಿಸ್ ರಾಜೀನಾಮೆ ಏಕೆ ಪಡೆದಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ