ನವದೆಹಲಿ: ಕರ್ನಾಟಕ ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ
Photo Credit: X
ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ರಾಹುಲ್ ಗಾಂಧಿ ಭೇಟಿಯಾಗಲಿಲ್ಲ. ಆದರೆ ಸಿದ್ದರಾಮಯ್ಯಗೆ ಸಂದೇಶವೊಂದನ್ನು ನೀಡಿದ್ದರು ಎನ್ನಲಾಗಿದೆ.
ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲೇ ಐದು ವರ್ಷವೂ ನಾನೇ ಸಿಎಂ ಎಂದಿದ್ದು ಭಾರೀ ಸಂಚಲನ ಮೂಡಿಸಿತ್ತು. ಡಿಕೆ ಶಿವಕುಮಾರ್ ಸಿಎಂ ಆಗುವ ಕನಸಿಗೆ ಇದು ತಣ್ಣೀರೆರಚಿತ್ತು. ಸಿದ್ದರಾಮಯ್ಯ ಹೇಳಿಕೆ ಡಿಕೆಶಿ ಬೆಂಬಲಿಗರ ಆಕ್ರೋಶಕ್ಕೂ ಕಾರಣವಾಗಿದೆ.
ಆದರೆ ಸಿದ್ದರಾಮಯ್ಯ ಈ ಹೇಳಿಕೆಗೆ ರಾಹುಲ್ ಗಾಂಧಿ ಸಂದೇಶವೇ ಕಾರಣ ಎನ್ನಲಾಗಿದೆ. ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯಗೆ ನಾಯಕತ್ವ ಬದಲಾವಣೆ ಇಲ್ಲ. ಸದ್ಯಕ್ಕೆ ಯಾವುದೇ ಬದಲಾವಣೆ ಮಾಡಿ ಗೊಂದಲ ಮೂಡಿಸುವುದು ಬೇಡ ಎಂದು ರಾಹುಲ್ ಗಾಂಧಿಯವರೇ ಸ್ಪಷ್ಟ ಸಂದೇಶ ನೀಡಿದ್ದರು ಎನ್ನಲಾಗಿದೆ.
ಈ ಕಾರಣಕ್ಕೆ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರೋಧಿಗಳಿಗೆ ಐದು ವರ್ಷ ನೀವೇ ಸಿಎಂ ಎಂದು ಖಡಕ್ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಸದ್ಯದ ಮಟ್ಟಿಗೆ ಸಂಪುಟ ಪುನರಾಚನೆಯೂ ಬೇಡ ಎಂದು ಹೈಕಮಾಂಡ್ ಸಂದೇಶ ನೀಡಿದೆ. ಹೀಗಾಗಿ ಸಿದ್ದರಾಮಯ್ಯ ಇಷ್ಟು ಆತ್ಮವಿಶ್ವಾಸದಿಂದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.