ಮಾರ್ಚ್​ 24, 25 ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ಪ್ರವಾಸ

ಶುಕ್ರವಾರ, 23 ಮಾರ್ಚ್ 2018 (17:53 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 24, 25 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ.24ರಂದು ಸಂಜೆ  ಮಳವಳ್ಳಿ ಯಲ್ಲಿ ಆಯೋಜಿಸಿರುವ ಜನಾಶೀರ್ವಾದ ಯಾತ್ರೆ ಹಾಗೂ ರೋಡ್ ಷೋನಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಿದ್ದಾರೆ. 
ಮಾ. 25ರಂದು ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ದಲ್ಲಿ ಕಾರ್ನರ್ ಮೀಟಿಂಗ್, ರೋಡ್ ಷೋ ನಡೆಯಲಿದೆ. ಹೀಗಾಗಿ ರಾಹುಲ್ ಗಾಂಧಿ ಬರುವ ಸಂದರ್ಭದಲ್ಲಿ ಮುಜುಗರಕ್ಕೀಡಾಗುವಂತೆ ನಡೆದುಕೊಳ್ಳಬಾರದು ಎಂದು
 
ಶ್ರೀರಂಗಪಟ್ಟಣ ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾ ಕಾಂಗ್ರೆಸ್   ಖಡಕ್ ಎಚ್ಚರಿಕೆ ನೀಡಿದೆ. ಬಂಡಾಯ ಶಾಸಕ ರಮೇಶ್ ಬಂಡಿಸಿದ್ದೇಗೌಡ ಗೆ ಟಿಕೆಟ್ ಕೊಡಲು ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ಯಾವುದೇ ರೀತಿಯ ಗೊಂದಲ ಆಗಬಾರದು ಎಂಬ ನಿಟ್ಟಿನಲ್ಲಿ ಖಡಕ್ ಸೂಚನೆ ನೀಡಲಾಗಿದೆ ಎನ್ನಲಾಗಿದೆ. 
 
ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಮುಂದೆ ಶಿಸ್ತಿನಿಂದ ವರ್ತಿಸುವಂತೆಯೂ ಸೂಚನೆ ನೀಡಲಾಗಿದೆ. ಶ್ರೀರಂಗಪಟ್ಟಣ ದಲ್ಲಿ ರಾಹುಲ್ ಗಾಂಧಿ ಚರ್ಚ್ ಅಥವಾ ಟಿಪ್ಪು ಸಮಾಧಿಗೆ ಭೇಟಿ ಕೊಡುವ ಸಾಧ್ಯತೆ ಇದೆ. ಆದರೂ ಈ ಬಗ್ಗೆ ಅಧಿಕೃತ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ