ರಸ್ತೆಯ ಬದಿಯ ಅಂಗಡಿಯಲ್ಲಿ ಟೀ ಕುಡಿದ ರಾಹುಲ್ ಗಾಂಧಿ

ಶನಿವಾರ, 24 ಫೆಬ್ರವರಿ 2018 (18:34 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಸ್ತೆಯ ಬದಿಯ ಟೀ ಅಂಗಡಿಯೊಂದರಲ್ಲಿ ಟೀ ಸೇವನೆ ಮಾಡಿದ್ದಾರೆ.

ಜನಾಶೀರ್ವಾದ ಯಾತ್ರೆ ಅಂಗವಾಗಿ ವಿಜಯಪುರಕ್ಕೆ ಬಂದ ರಾಹುಲ್ ಗಾಂಧಿ ಅವರು ರಸ್ತೆ ಬದಿಯ ಟೀ ಅಂಗಡಿಯಲ್ಲಿ ಚಹಾ ಹಾಗೂ ಬಿಸ್ಕೆಟ್ ಸೇವಿಸಿದ್ದಾರೆ. ಜೊತೆಯಲ್ಲಿದ್ದ ಕಾಂಗ್ರೆಸ್ ನಾಯಕರು ಕೂಡ ಚಹಾ ಕುಡಿದು ಸಾಥ್ ನೀಡಿದ್ದಾರೆ.
 
ಹೈದರಾಬಾದ ಕರ್ನಾಟಕ ಭಾಗದಲ್ಲಿ ಮೊದಲನೇ ಹಂತದಲ್ಲಿ ನಡೆಸಿದ ಜನಾಶೀರ್ವಾದ ಯಾತ್ರೆಯ ಸಂದರ್ಭದಲ್ಲಿ ರಾಯಚೂರಿನ ಕಲ್ಮಲಾದಲ್ಲಿ ರಸ್ತೆ ಬದಿಯ ಹೋಟೆಲ್‌ನಲ್ಲಿ ಮಿರ್ಚಿ ಬಜ್ಜಿ ಸೇವಿಸಿದ್ದರು. ಈಗ ರಸ್ತೆ ಬದಿಯ ಟೀ
 ಅಂಗಡಿಯಲ್ಲಿ ಟೀ ಕುಡಿಯುವ ಮೂಲಕ ಗಮನ ಸೆಳೆದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ