ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ!

ಭಾನುವಾರ, 8 ಏಪ್ರಿಲ್ 2018 (07:19 IST)
ಕೋಲಾರ : ಬಿಜೆಪಿಯಲ್ಲಿ ಎಲ್ಲವನ್ನೂ ಮೋದಿ ಹಾಗೂ ಅಮಿತ್ ಶಾ ನಿರ್ಣಯಿಸುತ್ತಾರೆ. ಇದನ್ನ ಕೇಳಲು ಬಿಜೆಪಿಯಲ್ಲಿ ಯಾರಿಗೂ ಧೈರ್ಯವಿಲ್ಲ ಎಂದು ರಾಹುಲ್ ಗಾಂಧಿ ಬಿಜೆಪಿ ಅವರನ್ನು ವ್ಯಂಗ್ಯ ಮಾಡಿದ್ದಾರೆ.


ಕಾಂಗ್ರೆಸ್‌ನ ಜನಾಶೀರ್ವಾದ ಯಾತ್ರೆ ಭಾಗವಾಗಿ ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,’ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಮಧ್ಯೆ ಒಪ್ಪಂದವಾಗಿದೆ. ಈ ದೇಶದಲ್ಲಿ ಅವರಿಬ್ಬರೇ ಮನುಷ್ಯರು ಅಂತಾ ಅಂದುಕೊಂಡಿದ್ದಾರೆ. ಎಲ್ಲವನ್ನೂ ಈ ಇಬ್ಬರೇ ನಿರ್ಣಯಿಸುತ್ತಾರೆ. ಇದನ್ನ ಕೇಳಲು ಬಿಜೆಪಿಯಲ್ಲಿ ಯಾರಿಗೂ ಧೈರ್ಯವಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು,’ ನರೇಂದ್ರ ಮೋದಿ ಸರ್ಕಾರ ಸಂವಿಧಾನ ಬದಲಾವಣೆ ಮಾಡಲು ಹೋದರೆ ದೇಶದಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ. ಅಂಬೇಡ್ಕರ್ ಮತ್ತು ದಲಿತರಿಗೆ ಅವಮಾನ ಮಾಡಿ, ನಂತರ ಅಂಬೇಡ್ಕರ್ ಪುತ್ಥಳಿ ಮುಂದೆ ಕೈ ಮುಗಿತಾರೆ. ಮೋದಿ ಸುತ್ತಲು ಭ್ರಷ್ಟಾಚಾರಿಗಳನ್ನ ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಮುನ್ನ ಭ್ರಷ್ಟರನ್ನ ವೇದಿಕೆಯಿಂದ ಕೆಳಗಿಳಿಸಿ ಮಾತನಾಡಲಿ. ಮೋದಿ ಬ್ಯಾಂಕ್ ಲೂಟಿಕೋರರ ಪರವಾಗಿ ಇದ್ದಾರೆ. ನೀರವ್ ಮೋದಿ, ಲಲಿತ್ ಮೋದಿ, ವಿಜಯ್ ಮಲ್ಯಗೆ ಮೋದಿ ಬೆಂಬಲವಿದೆ. ಲೂಟಿಕೋರಿಗೆ ಎಷ್ಟು ಬೇಕಾದರೂ ಸಾಲ ಕೊಡುತ್ತಾರೆ. ಇನ್ನೊಂದೆಡೆ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ