ರಾಹುಲ್‌ಗಿನ್ನೂ ಚಿಕ್ಕ ವಯಸ್ಸು, ಇಂದಲ್ಲಾ ನಾಳೆ ಪ್ರಧಾನಿಯಾಗ್ತಾರೆ: ಸಿಎಂ

ಬುಧವಾರ, 13 ಸೆಪ್ಟಂಬರ್ 2017 (12:55 IST)
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿನ್ನೂ ಚಿಕ್ಕ ವಯಸ್ಸು ಇಂದಲ್ಲಾ ನಾಳೆ ಪ್ರಧಾನಿಯಾಗ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿಯಾಗೋ ತಿರುಕನ ಕನಸು ಕಾಣ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
 
ರಾಹುಲ್ ಗಾಂಧಿಯವರಿಗೆ ಪ್ರಧಾನಿಯಾಗಲು ತುಂಬಾ ಅವಕಾಶಗಳಿವೆ. ಆದರೆ, ಪ್ರಧಾನಿ ಮೋದಿ ಮತ್ತೆ ಪ್ರಧಾನಿಯಾಗುವುದು ಕೂಡಾ ತಿರುಕನ ಕನಸಿನಂತೆ ಎಂದು ತಿರುಗೇಟು ನೀಡಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ. ಬಿಜೆಪಿಗೆ ಮತ್ತೆ ಅಧಿಕಾರಕ್ಕೆ ಏರುವ ಕನಸು ಕೂಡಾ ತಿರುಕನ ಕನಸಿನಂತಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ