ಜೋಡೋ ಪಾದಯಾತ್ರೆಯಲ್ಲಿ ರಾಹುಲ್-ಸಿದ್ದು ರನ್ನಿಂಗ್ ರೇಸ್
ಹೌದು, ಭಾರತ್ ಜೋಡೋ ಯಾತ್ರೆ ವೇಳೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುತ್ತಾರೆ. ಕಾಂಗ್ರೆಸ್ ನಾಯಕರ ಸುತ್ತ ಭದ್ರತಾ ಸಿಬ್ಬಂದಿ ಸುತ್ತುವರಿದಿರುತ್ತಾರೆ.
ಈ ವೇಳೆ ಇದ್ದಕ್ಕಿದ್ದಂತೆ ಎಲ್ಲರೂ ಆಶ್ಚರ್ಯ ಪಡುವ ರೀತಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಎಡಗೈಯನ್ನು ಹಿಡಿದುಕೊಂಡು ಓಡಲು ಆರಂಭಿಸುತ್ತಾರೆ. ಸಿದ್ದರಾಮಯ್ಯ ಅವರು ಕೂಡ ರಾಹುಲ್ ಗಾಂಧಿ ಸಮವಾಗಿ ಓಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.