ವೈಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜಗಳ ಮೇಲೆ ದಾಳಿ

ಗುರುವಾರ, 2 ಆಗಸ್ಟ್ 2018 (17:03 IST)
ಅನೈತಿಕ ಚಟುವಟಿಕೆ ಹಿನ್ನೆಲೆಯಲ್ಲಿ ಹಾಗೂ ವೈಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಿಕ್ಕಿಬಿದ್ದ ಯುವತಿಯರನ್ನು ರಕ್ಷಿಸಿದ್ದಾರೆ.

 ಬಳ್ಳಾರಿಯ ಲಾಡ್ಜ್ ಗಳ ಮೇಲೆ ಪೊಲೀಸರ ದಾಳಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳ್ಳಾರಿಯ ಭರಣಿ ಹಾಗೂ ದುರ್ಗ ಲಾಡ್ಜ್ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ನೆರೆಯ ಆಂಧ್ರ, ಒಡಿಸ್ಸಾ ಸೇರಿದಂತೆ ಹಲವು ರಾಜ್ಯಗಳ ಯುವತಿಯರನ್ನು ರಕ್ಷಣೆ ಮಾಡಲಾಗಿದೆ.

ಬಳ್ಳಾರಿಯ ರಾಯಲ್ ವೃತ್ತದ ಬಳಿಯಿರುವ ಲಾಡ್ಜ್ ಗಳು ಇವಾಗಿವೆ. ಈ ಲಾಡ್ಜ್ ಗಳಲ್ಲಿ ಅನೈತಿಕ ಚುಟುವಟಿಕೆ ನಡೆಸುತ್ತಿದ್ದರು ಎಂಬ ಆರೋಪವಿತ್ತು. ಈ ಹಿಂದೆ ಹಲವು ಬಾರಿ ಪೊಲೀಸ್ ದಾಳಿಯಾದರೂ ಮುಂದುವರೆದಿದ್ದ ಅಕ್ರಮ ಮಾಂಸ ದಂಧೆ ಎಗ್ಗಿಲ್ಲದೇ ಸಾಗಿತ್ತು. ಈ ಕುರಿತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ