ತೋಟಗಾರಿಕಾ ಉಪನಿರ್ದೇಶಕ ಮನೆ ಮೇಲೆ ರೇಡ್

ಮಂಗಳವಾರ, 5 ಡಿಸೆಂಬರ್ 2023 (15:00 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಭ್ರಷ್ಟರಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತೋಟಗಾರಿಕಾ ಉಪನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಮನಗರ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಮುನೇಗೌಡ ಮನೆ ಮೇಲೆ ದಾಳಿ ಮಾಡಿದ್ದು, ಚಿಕ್ಕಬಳ್ಳಾಪುರದ ನಂದಿಕ್ರಾಸ್, ಬೆಂಗಳೂರು, ರಾಮನಗರದಲ್ಲಿರುವ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುನೇಗೌಡರು ಚಿಕ್ಕಬಳ್ಳಾಪುರದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಅಕ್ರಮವಾಗಿ ಬಿಲ್ ಮಾಡಿರುವ ಆರೋಪ‌ ಕೇಳಿ ಬಂದಿತ್ತು ಚಿಕ್ಕಬಳ್ಳಾಪುರ ಲೋಕಾಯುಕ್ತ SP ರಾಮ ಅರೆಸಿದ್ದಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ