ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಾಪಕ ಮಳೆ ಸಾಧ್ಯೆತೆ

ಬುಧವಾರ, 7 ಜುಲೈ 2021 (17:06 IST)
ಕಾಬುಲ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಬಂಗಾಳ ಉಪಸಾಗರದಲ್ಲಿ ಜುಲೈ 11ರಂದು ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆ ಇದೆ. ಈ ಪ್ರಭಾವದಿಂದ ಜುಲೈ 8ರಿಂದ 11ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಜುಲೈ 8 ಹಾಗೂ 9ರಂದು ರಾಜ್ಯಾಾದ್ಯಂತ ಮಳೆ ವಿಂಗಡಣೆ ಹಾಗೂ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಹಾಗೂ ಅತಿಭಾರಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 8ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
 
ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಜುಲೈ 8ರಂದು ಸಾಧಾರಣದಿಂದ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 8 ಮತ್ತು 9 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹೇಳಿದ್ದಾರೆ.
 
ಎಲ್ಲೆಲ್ಲಿ ಮಳೆ:
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಬುಧವಾರ ವ್ಯಾಪಕ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ, ಕೋಲಾರದಲ್ಲಿ 6 ಸೆಂ.ಮೀ, ಬೀದರ್‌ನಲ್ಲಿ 4 ಸೆಂ.ಮೀ, ಗದಗದ ನರಗುಂದದಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ