ಜುಲೈ 11,12ರಂದು ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್

ಶನಿವಾರ, 10 ಜುಲೈ 2021 (18:37 IST)
ಬೆಂಗಳೂರು: ಬಂಗಾಳ ಉಪಸಾಗರದ ಪಶ್ಚಿಮ ಮಧ್ಯಭಾಗದಲ್ಲಿ ಜುಲೈ 11ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ಪ್ರಭಾವದಿಂದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 13ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಭಾರಿ, ಅತಿಭಾರಿ ಹಾಗೂ ಕೆಲವೊಮ್ಮೆ ಅತ್ಯಂತ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ. ಜುಲೈ 10 ಮತ್ತು 13ರಂದು ಆರೆಂಜ್ ಅಲರ್ಟ್ ಮತ್ತು ಜುಲೈ 11 ಮತ್ತು 12ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. 
 
ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್:
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ. ಜುಲೈ 10ರಿಂದ 13ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾಾರೆ.
 
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ:
ನೈರುತ್ಯ ಮುಂಗಾರು ರಾಜ್ಯದಲ್ಲಿ ಶುಕ್ರವಾರ ಸಾಮಾನ್ಯವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಕಡೆಗಳಲ್ಲಿ ವ್ಯಾಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗಿದೆ. 
 
ಮುಖ್ಯವಾಗಿ, ಮಂಗಳೂರಿನ ಪಣಂಬೂರಿನಲ್ಲಿ 15 ಸೆಂ.ಮೀ, ಮಂಗಳೂರಿನಲ್ಲಿ 8 ಸೆಂ.ಮೀ, ಕೋಲಾರ 6 ಸೆಂ.ಮೀ, ಕೊಪ್ಪಳ ಜಿಲ್ಲೆಯ ಕುಕ್ಕನೂರಿನಲ್ಲಿ  5 ಸೆಂ.ಮೀ. ಮಳೆಯಾಗಿದೆ. ಉಳಿದಂತೆ, ಕಲಬುರ್ಗಿಯ ಆಳಂದ 4 ಸೆಂ.ಮೀ, ಶಿರಾಲಿ, ಮುಲ್ಕಿ, ಧರ್ಮಸ್ಥಳ, ಉಡುಪಿಯ ಕೋಟ, ಕೋಲಾರದ ಶ್ರೀನಿವಾಸಪುರ, ಶಿವಮೊಗ್ಗದ ಹುಂಚದಕಟ್ಟೆ, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ