ಮಳೆಯ ಅಬ್ಬರ: ಪರಿಹಾರ ಕಾರ್ಯಗಳಿಗೆ ಸರಕಾರ ಆದ್ಯತೆ ನೀಡಿದೆ ಎಂದು ಸಚಿವ ಪರಮೇಶ್ವರ್

ಶುಕ್ರವಾರ, 29 ಜುಲೈ 2016 (17:36 IST)
ಬೆಂಗಳೂರು ಮಹಾನಗರದಲ್ಲಿ ಮಳೆಯ ಅಬ್ಬರ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಕಾರ್ಯ ಜಾರಿಯಲ್ಲಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಂದುವರೆದ ಮಳೆಯ ಅಬ್ಬರದಿಂದ ಸೂಕ್ತ ಪರಿಹಾರ ಕಾರ್ಯ ಜಾರಿಯಲ್ಲಿದೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿದ್ದೇನೆ. ಪರಿಸ್ಥಿತಿಯ ಅವಲೋಕನ ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
 
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ 900 ಟ್ರಾಫಿಕ್ ಪೊಲೀಸ್‌ರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಒಂದೇ ಬಾರಿ ಪರಿಹರಿಸಲು ಸಾಧ್ಯವಿಲ್ಲ. ಆದರೆ, ಹಂತ ಹಂತವಾಗಿ ಪರಿಹರಿಸಬಹುದು ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ