ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ

ಶುಕ್ರವಾರ, 21 ಅಕ್ಟೋಬರ್ 2022 (16:45 IST)
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.  ಹಲವು ಜಿಲ್ಲೆಗಳಿಗೆ ಹಳದಿ ಅಲೆರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ