ಬೆಂಗಳೂರಿನಲ್ಲಿ ರಾತ್ರಿ ಮಳೆ, ಕರ್ನಾಟಕದಲ್ಲಿ ಇನ್ನಷ್ಟು ಮಳೆ

Krishnaveni K

ಮಂಗಳವಾರ, 7 ಮೇ 2024 (09:08 IST)
ಬೆಂಗಳೂರು: ಬಿಸಿಲ ತಾಪದಿಂದ ಬಳಲಿದ್ದ ಬೆಂಗಳೂರಿಗೆ ಮತ್ತೆ ಮಳೆರಾಯ ತಂಪೆರಚಿದ್ದಾನೆ. ನಿನ್ನೆ ರಾತ್ರಿಯೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕರ್ನಾಟಕದ ಹಲವೆಡೆ ಮಳೆಯಾಗಿದೆ.

ಮೇ 5 ರಿಂದ ಬೆಂಗಳೂರಿನಲ್ಲಿ ಮಳೆಯಾಗಬಹುದು ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮೊನ್ನೆ ಒಂದು ದಿನ ಬಿಡುವು ಪಡೆದಿದ್ದ ವರುಣ ನಿನ್ನೆ ಬೆಂಗಳೂರಿಗೆ ಬಂದಿಳಿದಿದ್ದಾನೆ. ಭಾರೀ ಮಳೆಗೆ ಕೆಲವೆಡೆ ಮರಗಳು ಧರೆಗುಳಿದಿದ್ದು ಸಣ್ಣಪುಟ್ಟ ಹಾನಿಯಾದ ಬಗ್ಗೆ ವರದಿಯಾಗಿದೆ.

ಸತತ ಬಿಸಿಲಿನಿಂದ ಬೇಸತ್ತಿದ್ದ ಜನಕ್ಕೆ ಈ ಮಳೆ ಮುದ ನೀಡಿದೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ, ಕರ್ನಾಟಕದ ಹಲವೆಡೆ ಅಲ್ಲಲ್ಲಿ ಮಳೆಯಾಗಿದೆ.  ಇಂದೂ ಕೂಡಾ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಮುನ್ಸೂಚನೆಯಿದೆ.  ಮೇ 10 ರವರೆಗೂ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಅಬ್ಬರಿಸಿತ್ತು. ಗಾಳಿ ಸಮೇತ ಮಳೆಯಾಗಿದ್ದು 25 ಕ್ಕೂ ಹೆಚ್ಚು ಮರಗಳು ಧರಾಶಾಯಿಯಾಗಿವೆ. ಬಿಟಿಎಂ ಲೇಔಟ್, ಯಶವಂತಪುರ, ಜಯನಗರ, ಕೋರಮಂಗಲ, ಬಸವನಗುಡಿ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ