ಮಂಗಳೂರು: ದ.ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಈ ಬಾರಿ ದಾಖಲೆಯ ಮಳೆಯಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆರಾಯ, ಇಂದೂ ತನ್ನ ಅಬ್ಬರ ಮುಂದುವರಿಸಿದ್ದಾನೆ.
ಈ ಬಾರಿ ಶೇ. 17 ರಷ್ಟು ಹೆಚ್ಚು ಮಳೆಯಾಗಿದ್ದು, ಇದು ದಶಕದಲ್ಲೇ ಮೊದಲು ಎಂದು ಹವಾಮಾನ ಇಲಾಖೆ ಹೇಳಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕರ್ನಾಟಕದಲ್ಲಿ ಮುಂಗಾರು ಕ್ಷೀಣವಾಗಿದೆ. ಆದರೆ ಚಿಕ್ಕಮಗಳೂರು, ಸಕಲೇಶಪುರ, ಮಂಗಳೂರು, ಪುತ್ತೂರು ಸೇರಿದಂತೆ ದ.ಕ. ಜಿಲ್ಲೆಯ ಹಲವೆಡೆ ಇದೇ ರೀತಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.