ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ.ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ 48 ಗಂಟೆಗಳು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಮಂಗಳೂರು, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದಿನಿಂದ ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.