ರಾಜ್ಯದ ಬಹುತೇಕ ಕಡೆಗಳಲ್ಲಿ ಡಿ.2ರವರೆಗೂ ಮಳೆ

ಭಾನುವಾರ, 26 ನವೆಂಬರ್ 2023 (15:20 IST)
ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉಡುಪಿ,ಮಂಗಳೂರು ವಿಮಾನನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆಯಾಗಿದೆ. ದಾವಣಗೆರೆ ಹಾಗೂ ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ಕೆಲವೆಡೆ ಮಳೆಯಾಗಿದೆ, ಇಂದು ಕೂಡ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ