ಕರವಾಳಿ ದಕ್ಷಿಣ ಒಳನಾಡಿನಲ್ಲಿ ಮಳೆ

ಶನಿವಾರ, 26 ಮಾರ್ಚ್ 2022 (20:36 IST)
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿದ ಕೆಲವೆಡೆ ಮಳೆಯಾಗಿದ್ದು, ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಚಿಕ್ಕಮಗಳೂರಿನ ಬಾಳೆಹೊನ್ನೂರು, ಹಾವೇರಿಯ ಶಿಗ್ಗಾಂವ್, ಹಾಸನದ ಬೇಲೂರು, ಧಾರವಾಡದ ಅಣ್ಣಿಗೆರೆ ಮತ್ತು ರಾಮನಗರದ ಮಾಗಡಿಯಲ್ಲಿ ಮಳೆಯಾಗಲಿದೆ.
 
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 
ಮಾರ್ಚ್ 24ರವರೆಗೂ ಮಳೆ ಮುಂದುವರಿಕೆ:
 
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಹಲವೆಡೆ ಗುಡುಗು ಸಹಿತ ಮಳೆ ಆಗಿದೆ. ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.
 
ಗರಿಷ್ಠ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?
 
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠಿ ಉಷ್ಣಾಂಶ 18.40 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಜಿಲ್ಲೆ ಬಾಗಲಕೋಟೆಯಲ್ಲಿ ದಾಖಲಾಗಿದೆ. ಈ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶವು 18.400 ಡಿಗ್ರಿ ಸೆಲ್ಸಿಯಸ್ ಆಗಿದೆ.
 
ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:
 
ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 38ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 21 ಕಿ.ಮೀ ಆಗಿದೆ. ಬಾಗಲಕೋಟೆ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 51ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 33ರಷ್ಟು ತೇವಾಂಶ, ಇದೆ. ಮೈಸೂರು 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 39ರಷ್ಟು ತೇವಾಂಶ, ಬಳ್ಳಾರಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ ದಾಖಲಾಗಿದೆ.
 
ರಾಯಚೂರು 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27ರಷ್ಟು ತೇವಾಂಶ, ಚಿತ್ರದುರ್ಗ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 37ರಷ್ಟು ತೇವಾಂಶ, ಕಲಬುರಗಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27ರಷ್ಟು ತೇವಾಂಶ, ಚಿಕ್ಕಮಗಳೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 31ರಷ್ಟು ತೇವಾಂಶ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ