ಕಲಬುರ್ಗಿಯಲ್ಲಿ ಅಕಾಲಿಕ ಧಾರಾಕಾರ ಮಳೆ: ಇನ್ನೂ ಮುಂದುವರಿಯುವ ಸಾಧ್ಯತೆ

ಶುಕ್ರವಾರ, 10 ಏಪ್ರಿಲ್ 2015 (18:21 IST)
ನಿನ್ನೆಯಷ್ಟೇ ಬಿಸಿಲಿನ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕಾಣಿಸಿಕೊಂಡಿದ್ದ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಇದ್ದಕ್ಕಿದ್ದಂತೆ ಅಕಾಲಿಕ ಮಳೆ ಸುರಿಯುತ್ತಿದ್ದು, ಜನ ಖುಷಿ ವ್ಯಕ್ತಪಡಿಸುತ್ತಿದ್ದಾರೆ. 
 
ಜಿಲ್ಲೆಯಲ್ಲಿ ಇಂದು ಅಕಾಲಿಕ ಮಳೆ ಸುರಿಯುತ್ತಿದ್ದು, ಸುಮಾರು ಒಂದು ಗಂಟೆ ಕಾಲ ಧಾರಾಕಾರವಾಗಿ ಸುರಿಯಿತು. ಮಳೆಯು ಜಿಲ್ಲೆಯ ಮತ್ತೊಂದು ಪ್ರಮುಖ ನಗರ ಚಿಂಚೋಳಿ ಸೇರಿದಂತೆ ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯುತ್ತಿದೆ. 
 
ಗುಡುಗು ಸಹಿತ ಮಳೆ ಸುರಿಯುತ್ತಿರುವ ಈ ಅಕಾಲಿಕ ಮಳೆಯು ಇನ್ನೂ ಎರಡರಿಂದ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.  

ವೆಬ್ದುನಿಯಾವನ್ನು ಓದಿ