ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

ಮಂಗಳವಾರ, 11 ಅಕ್ಟೋಬರ್ 2022 (15:21 IST)
ಕರ್ನಾಟಕದಾದ್ಯಂತ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿನ್ನೆ ಮಳೆ ಆರಂಭವಾಗಿದೆ. ಆದಾಗ್ಯೂ ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಗುಲ್ಬರ್ಗ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್​ನೀಡಲಾಗಿದೆ. ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ