ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ
ಕರ್ನಾಟಕದಲ್ಲಿ ಕೆಲ ಕಡೆ ಮಳೆ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ನಿರೀಕ್ಷೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇನ್ನೂ 3 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲೂ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್ 24ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಭಾರೀ ಮಳೆಯಾಗುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.