ಇಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

Sampriya

ಭಾನುವಾರ, 19 ಮೇ 2024 (12:01 IST)
ಬೆಂಗಳೂರು: ಇಂದು ರಾಜ್ಯದ  15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಾಗೂ ಬೇರೆಲ್ಲ  ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.

ಮಳೆಯ ತೀವ್ರತೆಗೆ ಅನುಗುಣವಾಗಿ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನೂ ಕರವಾಳಿ ಕರ್ನಾಟಕವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಭಾರಿ ಮಳೆಯಾಗಲಿದೆ. ಹೀಗಾಗಿ ಈ ಮೂರೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಈ ಮೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಭಾರಿ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋ‍ಷಿಸಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ