ರಾಜ್ಯದಾದ್ಯಂತ ಇಂದು ಮಳೆ ಸಾಧ್ಯತೆ: 23 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Sampriya

ಭಾನುವಾರ, 12 ಮೇ 2024 (11:17 IST)
ಬೆಂಗಳೂರು: ಇಂದು ರಾಜ್ಯದಾದ್ಯಂತ ಉತ್ತಮ  ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಹೀಗಾಗಿ, ರಾಜ್ಯದ 23 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ 8 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಸನ,  ಶಿವಮೊಗ್ಗ, ಕೊಡಗು ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ (40ರಿಂದ 50 ಕಿ.ಮೀ. ವೇಗ) ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಇನ್ನುಳಿದ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯ ಬಗ್ಗೆಯೂ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡುಗು, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ  ಜಿಲ್ಲೆಗಳಲ್ಲಿ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಬುಧವಾರದವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೊ ಅಲರ್ಟ್ ನೀಡಿರುವ ಇಲಾಖೆ, ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದೆ ಎಂದು ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ