ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ , ಹೊರಗೆ ಪ್ರಶ್ನೆಪತ್ರಿಕೆ ಸೋರಿಗೆ: ಕಾಂಗ್ರೆಸ್ ವ್ಯಂಗ್ಯ

Sampriya

ಗುರುವಾರ, 1 ಆಗಸ್ಟ್ 2024 (17:08 IST)
Photo Courtesy X
ಬೆಂಗಳೂರು: ಸೋರುತಿಹುದು ಸಂಸತ್ ಮಾಳಿಗೆ, ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ. ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ ಎಂದು ಕೇಂದ್ರದ ಬಿಜೆಪೊ ಸರ್ಕಾರವನ್ನು ಕಾಂಗ್ರೆಸ್ ಲೇವಡಿ ಮಾಡಿದೆ.

ಬುಧವಾರ ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹೊಸದಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಮೊಗಸಾಲೆಯಲ್ಲಿ ನೀರು ಸೋರುತ್ತಿದೆ.  ಕಳೆದ ವರ್ಷವಷ್ಟೇ 971 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡದ ಹವಾಮಾನ ಸ್ಥಿತಿಸ್ಥಾಪಕತ್ವದ ಬಗ್ಗೆ ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.

ಇದೀಗ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಅಚ್ಚೆ ದಿನಗಳ ವಿಕಾಸದಲ್ಲಿ ವಾರಕ್ಕೆ ಮೂರು ಸೇತುವೆಗಳು ಮುರಿದು ಬೀಳುತ್ತಿವೆ, ದಿನಕ್ಕೊಂದು ರೈಲು ಹಳಿ ತಪ್ಪುತ್ತಿವೆ. ರಾಮಮಂದಿರದೊಳಗೆ ನೀರು ಇಳಿಯುತ್ತಿದೆ, ಸಂಸತ್ ಭವನವೂ ಸೋರುತ್ತಿದೆ. ಮೋದಿ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಲೋಪವಿಲ್ಲದೆ ಕೆಲಸವಾಗಿದೆಯೇ ಎಂದು ವ್ಯಂಗ್ಯ ಮಾಡಿದೆ.

ಸೋರುತಿಹುದು ಸಂಸತ್ ಮಾಳಿಗೆ,
ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ.

ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ!

20,000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೆಂಟ್ರಲ್ ವಿಸ್ತಾ ಎಂಬ ನೂತನ ಸಂಸತ್ ಭವನದ ಒಳಗೆ ಮೊದಲ ವರ್ಷಕ್ಕೆ ಮಳೆ ನೀರು ಸೋರಿಕೆಯಾಗಿದೆ.

ಅಚ್ಚೆ ದಿನಗಳ ವಿಕಾಸದಲ್ಲಿ
ವಾರಕ್ಕೆ ಮೂರು ಸೇತುವೆಗಳು ಮುರಿದು ಬೀಳುತ್ತಿವೆ,
ದಿನಕ್ಕೊಂದು ರೈಲು ಹಳಿ ತಪ್ಪುತ್ತಿವೆ,
ರಾಮಮಂದಿರದೊಳಗೆ ನೀರು ಇಳಿಯುತ್ತಿದೆ,
ಸಂಸತ್ ಭವನವೂ ಸೋರುತ್ತಿದೆ.

ಮೋದಿಯವರ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಲೋಪವಿಲ್ಲದ ಕೆಲಸ ಆಗಿದೆಯೇ?


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ