ಮುಂದಿನ 3 ದಿನ ರಾಜ್ಯದಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸೋಮವಾರ, 25 ಸೆಪ್ಟಂಬರ್ 2017 (17:04 IST)
ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಧಾರಾಕಾರ ಮಳೆಗೆ ರಾಜ್ಯದ ಹಲವೆಡೆ ಸಂಕಷ್ಟ ಎದುರಾಗಿದೆ. ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಬೆಂಗಳೂರಿನ ಪ್ರಸಿದ್ಧ ಅಣ್ಣಮ್ಮ ದೇಗುಲಕ್ಕೂ ಮಳೆಯ ನೀರು ನುಗ್ಗಿದೆ. ಈ ಮಧ್ಯೆ, ಮಳೆ ಇಷ್ಟಕ್ಕೆ ನಿಲ್ಲುವುದಿಲ್ಲ ಮತ್ತಷ್ಟು ದಿನ ಮಳೆಯ ರುದ್ರನರ್ತನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಂದಿನ 3 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇವತ್ತು ಸಹ ಮಳೆಯ ಅಬ್ಬರ ಮುಂದುವರೆಯಲಿದೆ.  ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಕೋಲಾರ, ಚಿಕ್ಕಬಳಾಪುರ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು ಸೇರಿ ರಾಜ್ಯದ ಹಲವೆಡೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹೀಗಾಗಿ, ಜನ ಈಗಲೇ ಮುನ್ನೆಚ್ಚರಿಕೆ ವಹಿಸಿದರೆ ಮಳೆಯಿಂದ ಆಗುವ ತೊಂದರೆಯಿಂದ ಪಾರಾಗಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ