ಕರ್ನಾಟಕದ ಈ ಭಾಗಗಳಲ್ಲಿ ಮೇ 28 ರವರೆಗೆ ಮಳೆ ಗ್ಯಾರಂಟಿ

Krishnaveni K

ಬುಧವಾರ, 22 ಮೇ 2024 (12:16 IST)
ಬೆಂಗಳೂರು: ಕಳೆದ ಮೂರು-ನಾಲ್ಕು ದಿನಗಳಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮೇ 28 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ‍್ಯತೆಯಿದೆ.

ಒಟ್ಟಾರೆಯಾಗಿ ನೋಡುವುದಾದರೆ ಕರ್ನಾಟಕದಲ್ಲಿ ಇದೀಗ ಮೋಡ ಕವಿದ ವಾತಾವರಣವಿದ್ದು, ತಾಪಮಾನ 29-30 ಡಿಗ್ರಿಯವರೆಗಿದೆ. ಆದರೆ ಮಧ್ಯಾಹ್ನದ ನಂತರ ಮಳೆಯಾಗುವ ಸೂಚನೆಯಿದೆ. ಬೆಂಗಳೂರಿನಲ್ಲೂ ಸದ್ಯಕ್ಕೆ ಇದೇ ವಾತಾವರಣವಿದೆ.

ಆದರೆ ಹವಾಮಾನ ಇಲಾಖೆ ವರದಿ ಪ್ರಕಾರ ಮೇ 28 ರವರೆಗೂ ಇದೇ ರೀತಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಮೈಸೂರು, ಕೊಡಗು ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮಳೆ ಮುಂದುವರಿಯಲಿದೆ.

ಕೇವಲ ದಕ್ಷಿಣ ಭಾಗದಲ್ಲಿ ಮಾತ್ರವಲ್ಲ, ಕರ್ನಟಕದ ಉತ್ತರ ಭಾಗಗಳಾದ ವಿಜಯಪುರ, ಗದಗ, ಚಿತ್ರದುರ್ಗ ಮುಂತಾದೆಡೆಯೂ ಇಂದು ಮಳೆಯಾಗುವ ಸಾಧ‍್ಯತೆಯಿದೆ. ಕಾವೇರಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗಿದ್ದು ಒಳಹರಿವು ಹೆಚ್ಚಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ