ಬೆಂಗಳೂರಿನಲ್ಲಿ ಸಂಜೆ ಮಳೆ, ಕರ್ನಾಟಕದಲ್ಲಿ ಈ ದಿನದವರೆಗೂ ಮುಂದುವರಿಯಲಿದೆ ಮಳೆ

Krishnaveni K

ಮಂಗಳವಾರ, 6 ಆಗಸ್ಟ್ 2024 (09:46 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆಯ ವಾತಾವರಣ ಮುಂದುವರಿದದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ವರುಣ ನಿನ್ನೆ ಸಂಜೆಯಿಂದ ಮತ್ತೆ ಸುರಿಯಲು ಶುರು ಮಾಡಿದ್ದಾನೆ.

ನಿನ್ನೆ ಸಂಜೆ ಬೆಂಗಳೂರಿನಲ್ಲೂ ಭಾರೀ ಮಳೆಯಾಗಿತ್ತು. ಶ್ರಾವಣ ಮಾಸದ ಮೊದಲ ದಿನ ಉತ್ತಮ ಮಳೆಯಾಗಿದೆ. ನಿನ್ನೆ ಸಂಜೆ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇನ್ನೂ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಾರಣವಿದ್ದು ಕೆಲ ಹೊತ್ತಿನ ಬಳಿಕ ಮಳೆ ಸುರಿಯುವ ಸಾಧ್ಯತೆಯಿದೆ.

ಇನ್ನು, ಕರಾವಳಿ, ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಅದು ಈಗಲೂ ಮುಂದುವರಿದಿದೆ. ಹವಾಮಾನ ವರದಿ ಪ್ರಕಾರ ಆಗಸ್ಟ್ 12 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಸಂಜೆ ಮಳೆಯಾಗಿದೆ. ಇಂದೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ, ಕನಿಷ್ಠ ಉಷ್ಣಾಂಶ 19 ಡಿಗ್ರಿಯಷ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ