ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Sampriya

ಗುರುವಾರ, 17 ಅಕ್ಟೋಬರ್ 2024 (17:09 IST)
ಬೆಂಗಳೂರು: ಮೂರು ದಿನಗಳ ಧಾರಾಕಾರ ಮಳೆಗೆ ತತ್ತರಿಸಿದ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿರುವಾಗಲೇ ಮತ್ತೆ ವರುಣನ ಎಚ್ಚರಿಕೆ ಕೊಟ್ಟಿದೆ. ಅಕ್ಟೋಬರ್ 21ರವರೆಗೆ ನಗರದಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅ.19ರವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗಿದೆ.

ಮಂಗಳೂರು, ಹಾವೇರಿ, ತುಮಕೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ದಾವಣಗೆರೆಯಲ್ಲಿ 9 ಸೆಂ.ಮೀ ಮಳೆಯಾಗಿದೆ. ನಿನ್ನೆಯಿದ್ದ ವಾಯುಭಾರ ಕುಸಿತ ಇಂದು ದುರ್ಬಲವಾಗಿದೆ. ಗಾಳಿಯ ಪರಿಚಲನೆ ಆಂಧ್ರದ ಕರಾವಳಿಯಲ್ಲಿ 5.8 ಕಿ.ಮೀ ಎತ್ತರದಲ್ಲಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ