ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆಯನ್ನು ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾಾರಿ ಜಿಲ್ಲೆಗಳಲ್ಲಿ ಸೆ.6ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಜಿಲ್ಲೆಯ ಕೋಟದಲ್ಲಿ 9 ಸೆಂ.ಮೀ., ಸಿದ್ದಾಪುರದಲ್ಲಿ 7 ಸೆಂ.ಮೀ., ಹಾವೇರಿ ಕೆಲವರಕೊಪ್ಪದಲ್ಲಿ 6 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಬಸಗೋಡ್, ಗೋಕರ್ಣ ಹಾಗೂ ಅಂಕೋಲದಲ್ಲಿ 5 ಸೆಂ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 5 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಜನ್ಮನೆ, ಬೆಳ್ಳಿಕೇರಿ, ಕಾರ್ಕಳ, ತಾಳಗುಪ್ಪದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.