: ವಾಯುಭಾರ ಕುಸಿತದ ಪರಿಣಾಮ ರಾಜ್ಯ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ನಾಳೆಯಿಂದ ಮತ್ತೆ ಮೂರು ದಿನ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡು, ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಭಾರತ ಕುಸಿತದಿಂದ ಮತ್ತೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.ನಾಳೆಯಿಂದ ಸೋಮವಾರದವರೆಗೂ ರಾಜ್ಯದ ಒಳನಾಡಿನಲ್ಲಿ ಮಳೆಯಾಗಲಿದೆ.
ಆದರೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪಕ ಉಸ್ತುವಾರಿ ಕೇಂದ್ರದ ನಿವೃತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಇಂದು ಮಳೆಯಾಗುವ ಸಾಧ್ಯತೆ ವಿರಳವಾಗಿದೆ ಎಂದು ಹೇಳಿದರು.