ರಾಜೀವ್ ಗಾಂಧಿ ಆರೋಗ್ಯ ವಿವಿ ಹಗರಣ- ತನಿಖೆಗೆ ಆಗ್ರಹ

ಗುರುವಾರ, 1 ಜೂನ್ 2023 (17:15 IST)
ರಾಜ್ಯದ ರಾಜೀವ್ ಗಾಂಧಿ ಯೂನಿವರ್ಸಿಟಿ  ಆಫ್ ಹೆಲ್ತ್ ಸೈನ್ಸಸ್ ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿದ್ದರೂ ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. 
ರಾಮಕೃಷ್ಣ ರೆಡ್ಡಿ ಅವರು ನಡೆಸಿರುವ ಅಕ್ರಮದ ಬಗ್ಗೆ  ಸ್ವತಃ ಸರ್ಕಾರದ ಒಂದು ಇಲಾಖೆಯೇ ವರದಿ ನೀಡಿದ್ದರೂ ಅತ್ಯಂತ ಪ್ರಭಾವಿ ಸ್ಥಾನದಲ್ಲಿರುವ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿಲ್ಲ. ತಮ್ಮ ಪುತ್ರನನ್ನು ಪ್ರವೇಶ ಪರೀಕ್ಷೆ ಇಲ್ಲದೆಯೇ ವೈದ್ಯಕೀಯ ಶಿಕ್ಷಣಕ್ಕೆ ಸೇರ್ಪಡೆ ಮಾಡಿರುವ ಹಾಗೂ ಪರೀಕ್ಷೆಯಲ್ಲಿ ಅಕ್ರಮವಾಗಿ ತೇರ್ಗಡೆ ಮಾಡಿಸಿರುವ ಆರೋಪಗಳಿದ್ದರೂ ಈ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿಲ್ಲ. ಅಷ್ಟೇ ಅಲ್ಲ, ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದರೂ ಯಾವುದೇ ತನಿಖೆ ಆರಂಭವಾಗದಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ ,ಇಂತಹ ಭ್ರಷ್ಟ ಅಧಿಕಾರಿಗಳಗೆ ಸರಿಯಾಗಿ ಶಿಕ್ಷೆ ಆಗಬೇಕು ಎಂದು  ಸಾಮಾಜಿಕ ಹೋರಾಟಗಾರ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ, ಅಧ್ಯಕ್ಷ ಲೋಕೇಶ್ ರಾಮ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ