ಪತ್ರ ಮುಖಾಂತರ ಬಿಸಿ ಮುಟ್ಟಿಸಿದ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರ್ಗಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.ಒಂದು ವೇಳೆ ವರ್ಗಾವಣೆ ಮಾಡಿದರೆ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದ ಕಹಿ ಬೆಳವಣಿಗೆ ಮಾಸುವ ಮುನ್ನವೇ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ವರ್ಗಾವಣೆ ಮಾಡುವ ಸಂಶಯ ವ್ಯಕ್ತವಾಗಿದೆ