ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ: ಸಿಎಂ, ಪರಮೇಶ್ವರ್‌ ದೆಹಲಿಗೆ ದೌಡು

ಗುರುವಾರ, 26 ಮೇ 2016 (11:05 IST)
ವಿಧಾನ ಪರಿಷತ್ ಮತ್ತು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ದೆಹಲಿಗೆ ತೆರಳುತ್ತಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಮತ್ತು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲು ದೆಹಲಿಗೆ ತೆರಳುತ್ತಿದ್ದು, ಇದೇ ವೇಳೆ ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಕುರಿತು ಹೈಕಮಾಂಡ್  ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
 
ಬರ ಪರಿಹಾರದ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಎಸ್‌ಸಿ ಅಧ್ಯಕ್ಷರರಾಗಿ ಬಿಡಿಎ ಆಯುಕ್ತ ಶ್ಯಾಂ ಭಟ್ ಆಯ್ಕೆ ವಿಚಾರ ಕುರಿತು ರಾಜ್ಯಪಾಲರು ವಿವರಣೆ ಕೇಳಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ವಿವಿಧ ಬೇಡಿಕೆ ಈಡೇರಿಸುವಂತೆ ಜೂನ್ 4 ರಂದು ರಾಜ್ಯಾದ್ಯಂತ ಪೊಲೀಸರು ಕೈಗೊಂಡ ಪ್ರತಿಭಟನೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಪೊಲೀಸರು ತಮ್ಮ ಕರ್ತವ್ಯ ಮರೆತು ಪ್ರತಿಭಟನೆ ನಡೆಸುವುದಿಲ್ಲ ಎಂದು ವಿಶ್ವಾಸವಿದೆ. ಅವರು ಅಶಿಸ್ತು ಪ್ರದರ್ಶಿಸುವುದಿಲ್ಲ ಎನ್ನುನ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. 


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ವೆಬ್ದುನಿಯಾವನ್ನು ಓದಿ