ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಎಸ್‌ಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿ, ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆಯ ಕುರಿತು ಚರ್ಚೆ ನಡೆಸಿದರು.
ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಮತ್ತು ರಾಜ್ಯಸಭೆಗೆ ನಡೆಯುವ ಚುನಾವಣೆ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಕೆಪಿಸಿಸಿ ಪ್ರಕಟಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಗೆ ಮೂರನೇಯ ಅಭ್ಯರ್ಥಿಯನ್ನು ಕಣ್ಣಕಿಳಿಸುವ ರಣತಂತ್ರ ರೂಪಿಸಲಾಗಿದೆ. ರಾಜ್ಯಸಭೆಗೆ ಮೂರನೇಯ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಅವರನ್ನು ಆಯ್ಕೆಮಾಡಲಾಗಿದೆ. ಆದರೆ, ವಿಧಾನ ಪರಿಷತ್ ಚುನಾವಣೆಗೆ 5 ನೇಯ ಅಭ್ಯರ್ಥಿಯನ್ನು ಕಣ್ಣಕಿಳಿಸುವುದಿಲ್ಲ ಎಂದು ತಿಳಿಸಿದ್ದಾರೆ.