ರಾಜ್ಯಸಭೆ ಚುನಾವಣೆ ಹಣದ ಆಮಿಷ: ಸಿಬಿಐಗೆ ಒಪ್ಪಿಸಿ ಎಂದ ಜೆಡಿಎಸ್ ಶಾಸಕ

ಸೋಮವಾರ, 6 ಜೂನ್ 2016 (15:41 IST)
ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣದ ಕುರಿತು ಸಿಬಿಐ ತನಿಖೆಯಾಗಲಿ ಎಂದು ಜೆಡಿಎಸ್ ಶಾಸಕ ಜೆ.ಟಿ.ದೇವೇಗೌಡ ಆಗ್ರಹಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜೆ.ಟಿ.ದೇವೇಗೌಡ, ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರು ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಖಾಸಗಿ ವಾಹಿನಿ ನಡೆಸಿರುವ ಸ್ಟಿಂಗ್ ಆಪರೇಶನ್ ಕುರಿತು ಸಿಬಿಐ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
 
ಶಾಸಕರು ಹಣದ ಬೇಡಿಕೆ ಇಟ್ಟಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸೇಕು. ಮುಂದಿನ ದಿನಗಳಲ್ಲಿ ಅವರು ಚುನಾವಣೆಗೆ ಸ್ಪರ್ಧೆ ಮಾಡದಂತೆ ಅವರ ಶಾಸಕ ಸ್ಥಾನವನ್ನು ರದ್ದುಪಡಿಸಲಿ ಎಂದು ಹೇಳಿದ್ದಾರೆ. 
 
ರಾಜ್ಯಸಭೆ ಚುನಾವಣೆಗೆ ಶಾಸಕರು ಸೂಚಿತರಿಗೆ ತೋರಿಸಿ ಮತ ಚಲಾಯಿಸ ಬೇಕಾಗುತ್ತದೆ. ಹಣ ಪಡೆದುಕೊಂಡು ಮತ ಚಲಾಯಿಸುವುದು ಅಸಾಧ್ಯ. ಬಿಜಿಪಿ ಪಕ್ಷ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ತಿಳಿಸಿತ್ತು. ಆದರೆ, ಇದೀಗ ಬಿಜೆಪಿ ಉಲ್ಟಾ ಹೊಡೆದು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡು ಜೆಡಿಎಸ್ ಪಕ್ಷವನ್ನು ದೂರವಿಟ್ಟಿದೆ ಎಂದು ಜೆಡಿಎಸ್ ಶಾಸಕ ಜೆ.ಟಿ.ದೇವೇಗೌಡ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ