ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಲಿದೆ.
ಎಎನ್ ಐ ಸುದ್ದಿ ಸಂಸ್ಥೆ ಈ ಬಗ್ಗೆ ವರದಿ ಪ್ರಕಟಿಸಿದ್ದು, ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದೆ.
ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಆದರೆ, ಉದ್ದೇಶಿತ ದೇವಾಲಯದ ನಿವೇಶನದ ಅಡಿಯಲ್ಲಿ ನೀರು ಕಂಡುಬಂದ ನಂತರ ಜನವರಿಯಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿತ್ತು.
ಎಂಜಿನಿಯರ್ ಗಳು ದೇವಾಲಯದ ಅಡಿಪಾಯದ ಕೆಲಸ ಮಾಡುತ್ತಿದ್ದಾರೆ. ಮುಂದಿನ ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ನವೆಂಬರ್ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ.