ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗೆ ರಾಮಲಿಂಗಾರೆಡ್ಡಿ ಪುತ್ರಿ ಒಲವು
ಗುರುವಾರ, 4 ಜನವರಿ 2018 (12:08 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಅವರು ಸ್ಪರ್ಧೆ ಮಾಡಲು ಒಲವು ತೋರಿದ್ದಾರೆ.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿರಿಯ ರಾಜಕಾರಣಿಗಳ ಮಕ್ಕಳು ರಾಜಕೀಯ ಪ್ರವೇಶ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ. ಸೌಮ್ಯರೆಡ್ಡಿ ಅವರು ಜಯನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಹವಣಿಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಲಾಗಿದೆ. ತಂದೆ ರಾಮಲಿಂಗಾರೆಡ್ಡಿ ಅವರ ಹೆಸರು ಹಾಗೂ ತಾವು ಕೈಗೊಂಡಿರುವ ಸಾಮಾಜಿಕ ಕಾರ್ಯಗಳು ಶ್ರೀರಕ್ಷೆಯಾಗಲಿವೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.