ದಲಿತನೆಂಬ ಕಾರಣಕ್ಕೆ ರಾಮಾನಾಥ್ ಆಯ್ಕೆ ಮಾಡಿದ್ರೆ ತಪ್ಪು: ಜಿ.ಪರಮೇಶ್ವರ್

ಸೋಮವಾರ, 19 ಜೂನ್ 2017 (17:19 IST)
ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕ ಒಮ್ಮತದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು. ಕೇವಲ ದಲಿತನೆಂಬ ಕಾರಣಕ್ಕೆ ರಾಮಾನಾಥ್ ಆಯ್ಕೆ ಮಾಡಿದ್ರೆ ತಪ್ಪು. ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ದಲಿತರ ಹೆಸರು ಬಳಸಿಕೊಂಡು ಪ್ರಚಾರ ಮಾಡಬಾರದು. ರಾಷ್ಟ್ರಪತಿ ಸ್ಥಾನ ಯಾವುದೇ ಒಂದು ಜಾತಿಗೆ ಸೀಮಿತವಾದುದಲ್ಲ. ಧರ್ಮ, ಭಾಷೆಗೂ ಸೀಮಿತವಾದುದಲ್ಲ ಎಂದು ತಿಳಿಸಿದ್ದಾರೆ. 
 
ದೇಶದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡುವ ಸಂದರ್ಭದಲ್ಲಿ. ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಪಕ್ಷಗಳ ಅಭಿಪ್ರಾಯ ಅಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಬಿಹಾರ್ ರಾಜ್ಯಪಾಲ ರಾಮಾನಾಥ್ ಕೋವಿಂದ್‌ರನ್ನು ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ