ರಮೇಶ್ ಜಾರಕಿಹೊಳಿ ಸಿ. ಡಿ. ಪ್ರಕರಣದಿಂದ ಅಧಿಕಾರಿಗಳು ರಿಲೀಫ್

ಗುರುವಾರ, 25 ನವೆಂಬರ್ 2021 (17:52 IST)
ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಎಂ.ಎನ್. ಅನುಚೇತ್, ಇನ್ಸ್‌ಪೆಕ್ಟರ್ ಮಾರುತಿ ಬಿ. ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಲಾಗಿದೆ.ರಮೇಶ್ ಜಾರಕಿಹೊಳಿ ಕೇಸ್‌ನ ತನಿಖೆ ಮುಕ್ತಾಯವಾಗಿದೆ. ಅಂತಿಮ ವರದಿ ಸಲ್ಲಿಸಲು ಅನುಮತಿ ಕೋರಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ಆದೇಶಕ್ಕೆ ತಡೆ ನೀಡಬೇಕೆಂದು ಹೈಕೋರ್ಟ್‌ಗೆ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಈ ವಿಚಾರಣೆ ನಡೆಸಿದ ಹೈಕೋರ್ಟ್ 8ನೇ ಎಸಿಎಂಎಂ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಕೇಸ್ ದಾಖಲಿಸದ‌ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ದಾಖಲಾಗಿತ್ತು. ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ