ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಮೇಶ್ ಜಾರಕಿಹೊಳಿ

ಬುಧವಾರ, 7 ಏಪ್ರಿಲ್ 2021 (10:00 IST)
ಬೆಳಗಾವಿ: ಕೊರೋನಾ ಸೋಂಕಿತರಾಗಿ ಗೋಕಾಕ್ ನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಡಿಸ್ಚಾರ್ಜ್ ಆಗಿದ್ದಾರೆ.

 

ರಮೇಶ್ ಜಾರಕಿಹೊಳಿ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಏಪ್ರಿಲ್ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 1 ರಿಂದ ಅವರು ಕೊರೋನಾದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇದೀಗ ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು, ಸಿಡಿ ಪ್ರಕರಣದಲ್ಲಿ ವಿಚಾರಣೆಗೊಳಪಡಬೇಕಿದ್ದ ರಮೇಶ್ ಜಾರಕಿಹೊಳಿ ಅನಾರೋಗ್ಯ ಸಮಸ್ಯೆಯಿಂದಾಗಿ ಹಾಜರಾಗಿರಲಿಲ್ಲ. ಹೀಗಾಗಿ ಎಸ್ ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ