ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ; ಇಂದು ವಿಚಾರಣೆಗೆ ಹಾಜರಾಗಲ್ಲ ಎಂದ ದಿನೇಶ್ ಕಲ್ಲಳ್ಳಿ

ಗುರುವಾರ, 4 ಮಾರ್ಚ್ 2021 (12:29 IST)
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಸ್ಫೋಟ ಮಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ಇಂದು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ತನಿಖೆ ತೀವ್ರಗೊಳಿಸಿದ ಪೊಲೀಸರು ಇಂದು ದಿನೇಶ್ ವಿಚಾರಣೆ ನಡೆಸಲು ಪೊಲೀಸರ ಮುಂದೆ ಹಾಜರಾಗುವಂತೆ ತಿಳಿಸಿದ್ದಾರೆ.  ಆದರೆ ಇಂದು ವಿಚಾರಣೆಗೆ ಬರೋದಿಲ್ಲ. ಮಾರ್ಚ್ 9ರಂದು ವಿಚಾರಣೆಗೆ ಹೋಗುತ್ತೇನೆ. ನನಗೆ ಜೀವ ಬೆದರಿಕೆ ಇದ್ದು, ಸೂಕ್ತ ಭದ್ರತೆ ಇಲ್ಲ. ಹೀಗಾಗಿ ನಾನು ವಿಚಾರಣೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ